Webdunia - Bharat's app for daily news and videos

Install App

ಸಿಎಂ ಪುತ್ರ ರಾಕೇಶ್ ಸಿದ್ದರಾಮಯ್ಯ ನಿಧನಕ್ಕೆ ಗಣ್ಯರ ಶೋಕ!

Webdunia
ಶನಿವಾರ, 30 ಜುಲೈ 2016 (18:26 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ (39) ಅವರು ಬೆಲ್ಜಿಯಂ ಪ್ರವಾಸದಲ್ಲಿದ್ದು, ಪ್ಯಾಂಕ್ರಿಯಸ್ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಲ್ಜಿಯಂ ದೇಶದ ಬ್ರಸೆಲ್ಸ್ ನಗರದಲ್ಲಿರುವ ಆಂಟಿವರ್ಪ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಆತ್ಮೀಯ ಸ್ನೇಹಿತರು. ಇಂದು ಅವರ ಪುತ್ರ ರಾಕೇಶ್ ನಿಧನರಾಗಿರುವುದು ಬೇಸರ ತಂದಿದೆ. ಅವರ ಕುಟುಂಬಕ್ಕೆ ದೇವರು ದುಖ ಬರಿಸುವ ಶಕ್ತಿ ನೀಡಲಿ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
 
ಮುಖ್ಯಮಂತ್ರಿ ಅವರ ಪುತ್ರ ರಾಕೇಶ್ ಸಾವಿನ ಸುದ್ದಿ ಆಘಾತ ತಂದಿದೆ ಎಂದು ರಾಜ್ಯ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
 
ಸಿದ್ದರಾಮ್ಯನವರ ಪುತ್ರ ರಾಕೇಶ್ ನಿಧನಕ್ಕೆ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ವಿಷಾದ ವ್ಯಕ್ತಪಡಿಸಿದ್ದಾರೆ.
 
ಸಿಎಂ ಪುತ್ರ ರಾಕೇಶ್ ಅವರ ನಿಧನದ ಸುದ್ದಿ ಬೇಸರ ತಂದಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು, ಪುತ್ರನನ್ನು ಕಳೆದುಕೊಂಡವರಿಗೆ ಗೊತ್ತು ಆ ನೋವು ಏನೆಂದು. ರಾಕೇಶ್ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಕೋರಿದ್ದಾರೆ.
 
ಸಿಎಂ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರು ಉತ್ತಮ ರಾಜಕೀಯ ಗುಣ ಹೊಂದಿದ್ದು, ನಾಯಕತ್ವ ನಿಭಾಯಿಸುವಲ್ಲಿ ಸಮರ್ಥರಾಗಿದ್ದರು. ಅವರ ನಿಧನದ ಸುದ್ದಿ ಬೇಸರದ ಸಂಗತಿ ಎಂದು ಸಚಿವ ಯು.ಟಿ.ಖಾದರ್ ಸಂತಾಪ ಸೂಚಿಸಿದ್ದಾರೆ.
 
ನಿನ್ನೆಯಷ್ಟೇ ಸಿಎಂ ಪುತ್ರ ರಾಕೇಶ್ ಅನಾರೋಗ್ಯದ ಕುರಿತು ಮಾತನಾಡುತ್ತಿದ್ದೆ. ಅವರು ನಿಧನರಾಗಿದ್ದು ದುಖಕರ ಸಮಾಚಾರವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಷಾದ ವ್ಯಕ್ತಪಡಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ ನಿಧನಕ್ಕೆ ರಾಜ್ಯದ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments