Publish Date: Tue, 26 Sep 2017 (13:57 IST)
Updated Date: Tue, 26 Sep 2017 (14:00 IST)
ಬಿಜೆಪಿ ಅಧಿಕಾರದಲ್ಲಿದ್ದಾಗ ಬಿಬಿಎಂಪಿ ವ್ಯಾಪ್ತಿಗೆ ರಾಜಕೀಯ ಕಾರಣಗಳಿಗಾಗಿ 120 ಹಳ್ಳಿಗಳನ್ನು ಸೇರ್ಪಡೆಗೊಳಿಸಿತು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬೆಂಗಳೂರಿನ ಎಲ್ಲಾ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಿಸುತ್ತೇನೆ. ಬಿಬಿಎಂಪಿಯನ್ನು ವಿಭಜಿಸುವ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಗೋವಾದಲ್ಲಿ ಕನ್ನಡಿಗರ ಮನೆಗಳ ನೆಲಸಮ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ, ಗೋವಾ ಸರಕಾರಕ್ಕೆ ಕೂಡಲೇ ಸ್ಟ್ರಾಂಗ್ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.
ಕೆಂಪೆಗೌಡ ನಿಗಮ ಜಯಂತಿಯನ್ನು ಮಾಡಿದ್ದು ಯಾರು? ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣ ಎಂದು ಹೆಸರಿಟ್ಟವರು ಯಾರು? ಎಂದು ಸಿಎಂ ಸಿದ್ದರಾಮಯ್ಯ ಜೆಡಿಎಸ್ ಶಾಸಕ ಗೋಪಾಲಯ್ಯಗೆ ಟಾಂಗ್ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.