ರಾಜ್ಯ ಸರಕಾರ ಸಾಲ ಮನ್ನಾ ಮಾಡಿದರೆ ಕೇವಲ ಶೇ.28 ರಷ್ಟು ರೈತರಿಗೆ ಲಾಭವಾಗುತ್ತದೆ. ಕೇಂದ್ರ ಸರಕಾರ ಸಾಲ ಮನ್ನಾ ಮಾಡಿದರೆ ಶೇ,70 ರಷ್ಟು ರೈತರಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಯಡಿಯೂರಪ್ಪ ಕೇಂದ್ರ ಸರಕಾರದ ಮನವೊಲಿಸಿ ರೈತರ ಸಾಲ ಮನ್ನಾ ಮಾಡುತ್ತಾರೆಯೇ ಎನ್ನುವುದನ್ನು ಕಾದು ನೋಡುತ್ತಿದ್ದೇನೆ. ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಬಡವರ ಕೆಲಸ ಮಾಡಲು 56 ಇಂಚಿನ ಎದೆ ಬೇಕಾಗಿಲ್ಲ. ಹೃದಯಬೇಕು. ಪ್ರಧಾನಿ ಮೋದಿಯವರು ತಮ್ಮ ಹೃದಯ ವೈಶಾಲ್ಯತೆಯಿಂದ ರೈತರ ಸಾಲ ಮನ್ನಾ ಮಾಡಬೇಕು ಎಂದರು.
ಉತ್ತರಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡುವ ಕೇಂದ್ರ ಸರಕಾರ, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇನೆ. ಒಂದು ವೇಳೆ ಕೇಂದ್ರ ಸರಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಶೀಘ್ರದಲ್ಲಿ ರಾಜ್ಯ ಸರಕಾರ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.