Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೇಂದ್ರ ಸರ್ಕಾರ ಬರಪರಿಹಾರ ಕೊಟ್ಟಿದ್ದಕ್ಕೆ ಸುಪ್ರೀಂ ಕೋರ್ಟ್ ಗೆ ಧನ್ಯವಾದ ಸಲ್ಲಿಸಿದ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಶನಿವಾರ, 27 ಏಪ್ರಿಲ್ 2024 (13:19 IST)
ಬೆಂಗಳೂರು: ಕರ್ನಾಟಕಕ್ಕೆ ಬರಪರಿಹಾರ್ಥವಾಗಿ ಸುಪ್ರೀಂಕೋರ್ಟ್ 3,454 ಕೋಟಿ ರೂ. ಬಿಡುಗಡೆ ಮಾಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಮೂಲಕ ಸುದೀರ್ಘ ಪತ್ರ ಬರೆದು ಸುಪ್ರೀಂಕೋರ್ಟ್ ಗೆ ಧನ್ಯವಾದ ಸಲ್ಲಿಸಿದ್ದಲ್ಲದೆ, ಕೇಳಿದಷ್ಟು ಪರಿಹಾರ ಕೊಡದ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಪತ್ರದ ಸಾರಾಂಶ ಇಲ್ಲಿದೆ.


ಕೇಂದ್ರ Bharatiya Janata Party (BJP) ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3,498 ಕೋಟಿಗೆ ಅನುಮೋದನೆ ನೀಡಿ, ರೂ. 3,454 ಕೋಟಿ ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ.

 
ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ.

ಇದರಲ್ಲಿ BJP Karnataka ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ.


ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ Narendra Modi ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ ರೂ.18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ.3498.98 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡಿದ ಕೇಂದ್ರ