Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಇಂದು ಹೈದರಾಬಾದ್ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಿದ್ದು, ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ. ಬೆಳಗ್ಗೆ HAL ವಿಮಾನ ನಿಲ್ದಾಣದಿಂದ ತೆರಳಿದರು. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ. ಇಂದು ರಾತ್ರಿ ಹೈದರಾಬಾದ್ನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಹೈದರಾಬಾದ್ನ ಬೇಗಂಪೇಟ್ ವಿಮಾನ ನಿಲ್ದಾಣದ ಮೂಲಕ ಕಲಬುರಗಿಗೆ ಸಿಎಂ ಬರಲಿದ್ದಾರೆ. ಕಲಬುರಗಿಯ SVP ವೃತ್ತದಲ್ಲಿ ಬೆಳಗ್ಗೆ 8.30ಕ್ಕೆ ಸರ್ಧಾರ್ ವಲ್ಲಭ ಬಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.