Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೈಸೂರು: ನಾನು ಒಂದು ದಿನ ಪ್ರಚಾರ ಮಾಡಿದ್ರೆ ಸಾಕು. ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೋತು ಹೋಗ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಆತ್ಮವಿಶ್ವಾಸದಿಂದಲೇ ಹೇಳಿಕೊಂಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸುವುದಾಗಿ ಹೇಳುತ್ತಿರುವ ಇಬ್ಬರೂ ಮಾಜಿ ಸಿಎಂಗಳಿಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ‘ನನಗೂ ಸಹ ಅವರನ್ನು ಸೋಲಿಸುವ ಶಕ್ತಿ ಇದೆ. ಒಂದು ದಿನ ಪ್ರಚಾರ ಮಾಡಿದ್ರೆ ಸಾಕು. ಅವರು ಸೋಲ್ತಾರೆ’ ಎಂದು ಹೇಳಿಕೊಂಡಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರವಲ್ಲದೆ ಇನ್ನೊಂದು ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು ‘ನಾನು ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬೇರೆಲ್ಲೂ ಸ್ಪರ್ದಿಸುತ್ತಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.