Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇಂಧು ಕೆಲವೇ ಕ್ಷಣಗಳಲ್ಲಿ ದಿನಾಂಕ ಪ್ರಕಟಗೊಳ್ಳಲಿರುವ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲು ಸಿಎಂ ಸಿದ್ದರಾಮಯ್ಯ ಬಾಕಿ ಇರುವ ಕಡತಗಳ ವಿಲೇವಾರಿಗೆ ಮುಂದಾಗಿದ್ದಾರೆ.
ತಮ್ಮ ಕಚೇರಿಯಲ್ಲಿ ಕುಳಿತು, ಸಚಿವ ವಿನಯ್ ಕುಲಕರ್ಣಿ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಜತೆಗೂಡಿ ಸಿಎಂ ಸಿದ್ದರಾಮಯ್ಯ ಧಾವಂತದಲ್ಲಿ ಕಡತಗಳಿಗೆ ಸಹಿ ಹಾಕುತ್ತಿದ್ದಾರೆ. ಒಂದು ವೇಳೆ ಚುನಾವಣಾ ನೀತಿ ಸಂಹಿತೆ ಜಾರಿಯಾದರೆ ಯಾವುದೇ ಆಡಳಿತಾತ್ಮಕ ಕೆಲಸಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ.
ಈ ಹಿನ್ನಲೆಯಲ್ಲಿ ಆದಷ್ಟು ಬೇಗ ತಮ್ಮ ಕೆಲಸ ಮಾಡುತ್ತಿದ್ದಾರೆ. ಇಂದು ಮುಖ್ಯ ಚುನಾವಣಾಧಿಕಾರಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಿಸಲಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ