Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಗೋ ಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯದಲ್ಲಿ ಜಾರಿ ಮಾಡುವ ಉದ್ದೇಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರ ಆದೇಶಿಸುವ ಎಲ್ಲಾ ಕಾಯಿದೆಗಳನ್ನು ಜಾರಿಗೆ ತರಬೇಕೆಂದೇನಿಲ್ಲ. ಕಾಯಿದೆಯ ಎಲ್ಲಾ ಅಂಶಗಳನ್ನು ಪರಿಶೀಲಿಸಿ ನಂತರ ಕೇಂದ್ರಕ್ಕೆ ವರದಿ ನೀಡುವುದಾಗಿ ಸಿಎಂ ಹೇಳಿದ್ದಾರೆ.
ಗೋ ಹತ್ಯೆ ನಿಷೇಧ ಕಾಯಿದೆ ಬಗ್ಗೆ ಕೇರಳ, ಪ. ಬಂಗಾಲ ಸೇರಿದಂತೆ ಕೆಲವು ರಾಜ್ಯಗಳ ಸಿಎಂಗಳು ಅಪಸ್ವರ ಎತ್ತಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ನಿಟ್ಟಿನಲ್ಲಿ ಎಲ್ಲಾ ಸಿಎಂಗಳ ಬೆಂಬಲ ಕೋರಿ ಪತ್ರ ಬರೆದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ