ಬೆಂಗಳೂರು: ಟಿಪ್ಪು ಜಯಂತಿ ಕಾಳಗ ಮತ್ತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿಯವರು ರಾಜಕೀಯಕ್ಕಾಗಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ಅವರೇನೇ ವಿರೋಧ ಮಾಡಿದರೂ ನಾವು ಸೊಪ್ಪು ಹಾಕಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
‘ಕೆಜೆಪಿಯಲ್ಲಿದ್ದಾಗ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಟಿಪ್ಪು ಜಯಂತಿಗೆ ಖಡ್ಗ ಹಿಡಿದು, ಹಾರ ಹಾಕಿಸಿಕೊಂಡಿದ್ದರು. ಇದೀಗ ಬಿಜೆಪಿಗೆ ಬಂದಾಗ ಯಾಕೆ ವಿರೋಧಿಸುತ್ತಿದ್ದಾರೆ?’ ಎಂದು ಸಿಎಂ ಪ್ರಶ್ನಿಸಿದ್ದಾರೆ. ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಹಾಕಬೇಡಿ ಎಂದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಆಮಂತ್ರಿಸುವುದು ನಮ್ಮ ಕರ್ತವ್ಯ. ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ