ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಸವಕಲ್ಯಾಣದಲ್ಲೂ ಸ್ಪರ್ಧಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಮೂಲಕ ಕುಮಾರಸ್ವಾಮಿ ನಂತರ, ಸಿಎಂ ಸಿದ್ದರಾಮಯ್ಯ ಕೂಡಾ ಎರಡು ಕಡೆ ಸ್ಪರ್ಧೆ ನಡೆಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಬಾರಿ ಸಿಎಂ ಸಿದ್ದರಾಮಯ್ಯಗೆ ಗೆಲುವು ಗ್ಯಾರಂಟಿಯಲ್ಲ ಎನ್ನುವುದು ಆಂತರಿಕ ವರದಿಯಿಂದ ತಿಳಿದುಬಂದಿರುವ ಹಿನ್ನಲೆಯಲ್ಲಿ ಬಸವಕಲ್ಯಾಣದಲ್ಲೂ ಸ್ಪರ್ಧೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸ್ಸಿನ ಲಾಭ ಪಡೆಯಲು ಸಿಎಂ ಬಸವಕಲ್ಯಾಣದಲ್ಲಿ ಸ್ಪರ್ಧೆಗಿಳಿಯುವ ನಿರೀಕ್ಷೆಯಿದೆ. ಆ ಮೂಲಕ ಲಿಂಗಾಯತ ಮತ ಸೆಳೆಯುವ ಹುನ್ನಾರ ನಡೆಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.