ವರಣಾ ಕ್ಷೇತ್ರದ ಹೊಣೆಯನ್ನು ಡಾ.ಯತೀಂದ್ರನಿಗೆ ಬಿಟ್ಟು ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಎರಡನೇಯ ಪುತ್ರನ ರಾಜಕೀಯ ಭವಿಷ್ಯಕ್ಕೆ ಅಡಿಗಲ್ಲು ಹಾಕಿದ್ದಾರೆ.
ಮೈಸೂರು ಜಿಲ್ಲೆಯ ಮೆಲ್ಲಹಳ್ಳಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ನೂ ಮುಂದೆ ವರುಣಾ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ಎರಡನೇಯ ಪುತ್ರ ಡಾ.ಯತಿಂದ್ರ ನೋಡಿಕೊಳ್ಳುತ್ತಾನೆ. ಆತನಿಗೆ ರಾಜಕೀಯ ಅನುಭವ ಇಲ್ಲ. ಹೀಗಾಗಿ ತಮ್ಮೆಲ್ಲರ ಆಶೀರ್ವಾದ ಅತನಿಗೆ ಬೇಕು ಎಂದು ಮನವಿ ಮಾಡಿಕೊಂಡರು.
ಈ ಸಮಾರಂಭದ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಅವರ ಪುತ್ರ ಡಾ.ಯತಿಂದ್ರ ಸಹ ಭಾಗಿಯಾಗಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಜೇಷ್ಠಪುತ್ರ ರಾಕೇಶ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಅವರ ಎರಡನೆಯ ಪುತ್ರ ಡಾ.ಯತೀಂದ್ರ ಅವರು ರಾಜಕೀಯಕ್ಕೆ ಬರಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ