ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಅರೆಸ್ಟ್ ಆದ್ರೆ ಸಿಎಂ ಬುಡಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಂಪಯ್ಯ ಸೇರಿ ಚಿಕ್ಕರಾಯಪ್ಪನನ್ನು ಬಚ್ಚಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪನಿಂದ ಮಹತ್ವದ ದಾಖಲೆಗಳು ಸಿಕ್ಕಿವೆ. ಒಂದು ವೇಳೆ ಚಿಕ್ಕರಾಯಪ್ಪ ಅರೆಸ್ಟ್ ಆದ್ರೆ ಸಿಎಂ ಬುಡಕ್ಕೆ ಬರುತ್ತೆ. ಚಿಕ್ಕರಾಯಪ್ಪನನ್ನು ಏಲ್ಲಿ ಬಚ್ಚಿಟ್ಟಿದ್ದೀರಾ ಸಿದ್ದರಾಮಯ್ಯ ಅವರೇ ಎಂದು ಪ್ರಶ್ನಿಸಿದ್ದಾರೆ.
ಬಿಎಸ್ವೈ, ಶ್ರೀನಿವಾಸ್ ಪ್ರಸಾದ್ರನ್ನು ಭೇಟಿ.....
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದರು.
ನಂಜನಗೂಡಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷ ಸೇರಲ್ಲಿದ್ದಾರೆ ಎಂದು ಬಿಎಸ್ವೈ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ