ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್.ವೈ.ಮೇಟಿ ಸೇರಿ ವ್ಯವಸ್ಥೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಟಿ ರಾಸಲೀಲಿ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮೊದಲೇ ಮಾಹಿತಿ ಇತ್ತು. ಪ್ರಕರಣವನ್ನು ಮುಚ್ಚಿ ಹಾಕುವಂತೆ ಖುದ್ದು ಮುಖ್ಯಮಂತ್ರಿ ಅವರೇ ಮೇಟಿಗೆ ಸೂಚನೆ ನೀಡಿದ್ದರು. ಇದು ಅಕ್ಷಮ್ಯ ಅಪರಾಧ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದಾರೆ. ಸಿಐಡಿ ಅಧಿಕಾರಿಗಳು ಮೇಟಿ ಅವರಿಗೆ ಕ್ಲೀನ್‌ಚೀಟ್ ನೀಡಿದರು ಆಶ್ಚರ್ಯಪಡಬೇಕಿಲ್ಲ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದ ಸಚಿವರು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕಪ್ಪು ಹಣದ ಸರದಾರರಾದ ಜಯಚಂದ್ರ ಹಾಗೂ ಚಿಕ್ಕರಾಯಪ್ಪರನ್ನು ರಕ್ಷಿಸಲು ಸಿಎಂ ಯತ್ನಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ