ಕಾವೇರಿ ನದಿ ನೀರು ಬಿಡುವಂತೆ ತಮಿಳುನಾಡು ರೈತರಿಂದ ಸಿಎಂ ಸಿದ್ದರಾಮಯ್ಯ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಾವೇರಿ ನದಿಯಿಂದ ನೀರು ಬಿಡುವಂತೆ ಮನವಿ ಮಾಡಿಕೊಳ್ಳಲು ತಮಿಳುನಾಡಿನ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗೃಹ ಕಚೇರಿಗೆ ಬಂದಿದ್ದರು.
ರೈತರ ಜೊತೆ ಸಮಾಲೋಚನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಕಣಿವೆಯಲ್ಲಿನ ಡ್ಯಾಂಗಳಲ್ಲಿ ನೀರಿನ ಕೊರತೆ ಇದೆ. ಬೇಕಾದರೆ ನೀವೇ ಡ್ಯಾಂಗೆ ತೆರಳಿ ಪರಿಶೀಲನೆ ನಡೆಸಿ ಎಂದು ಹೇಳಿದರು.
ನೀವು ನೀರಾವರಿಗಾಗಿ ನೀರು ಬಿಡುವಂತೆ ಕೇಳುತ್ತಿದ್ದೀರಿ. ಆದರೆ, ನಮಗೆ ಕುಡಿಯಲು ನೀರಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯ ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ