ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧೈರ್ಯ ಇಲ್ಲ ಎಂದು ಪೇಜಾವರದ ವಿಶ್ವೇಶ ತೀರ್ಥ ಶ್ರೀಗಳು ವ್ಯಂಗ್ಯವಾಡಿದ್ದಾರೆ.
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಯ ನಂಬಿಕೆಯನ್ನು ಮೂಢನಂಬಿಕೆ ಎನ್ನುವುದು ಸರಿಯಲ್ಲ. ಯಾವ ಆಚರಣೆಯಿಂದ ಸಮಾಜಕ್ಕೆ ಹಾನಿ ಇದೆಯೋ ಅಂತಹ ಆಚರಣೆಗಳನ್ನು ಪಟ್ಟಿ ನಿಷೇಧಿಸಿ. ಅದಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದರು.
ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಧೈರ್ಯ ಇಲ್ಲದ ಸಿಎಂ ಸಿದ್ದರಾಮಯ್ಯ ನಮ್ಮಲ್ಲಿ ಬರಲಿ, ಯಾವುದನ್ನು ನಿಷೇಧಿಸಬೇಕು ಎಂದು ಸಲಹೆ ನೀಡತ್ತೇನೆ. ಆ ಧೈರ್ಯ ನನಗೆ ಇದೆ ಎಂದು ಹೇಳಿದರು.
ನಾವು ಮೌಢ್ಯಗಳನ್ನು ನಂಬುವುದಿಲ್ಲ. ಆದರೆ, ಜನರ ನಂಬಿಕೆಗಳನ್ನು ಮೌಢ್ಯ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ ಎಂದು ಪೇಜಾವರದ ವಿಶ್ವೇಶ ತೀರ್ಥ ಶ್ರೀಗಳು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ