ಸರ್ವಪಕ್ಷಗಳ ಸಭೆಗೆ ಕಾವೇರಿ ಕಣಿವೆಯ ಶಾಸಕರನ್ನು ಸಭೆಗೆ ಕರೆಯದೆ,ಕಾವೇರಿ ಹಿತರಕ್ಷಣಾ ಸಮಿತಿ ಸದಸ್ಯರನ್ನು ಕೂಡಾ ಸಭೆಗೆ ಕರೆಯದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ದುರಹಂಕಾರದ ಸರಕಾರ ಎಂದು ಮೇಲು ಕೋಟೆ ಕ್ಷೇತಚ್ರದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಶಾಸಕರಾಗಿ ಆಯ್ಕೆಯಾದ ನಂತರವೇ ಮುಖ್ಯಮಂತ್ರಿಯಾಗಿದ್ದಾರೆ ಎನ್ನುವುದು ಮರೆತಂತಿದೆ. ನೀರು ಬಿಡುಗಡೆ ಮಾಡಿದರೆ ಮುಂದಾಗುವ ಅನಾಹುತಕ್ಕೆ ಸರಕಾರವೇ ಹೊಣೆ ಎಂದು ಎಚ್ಚರಿಸಿದ್ದಾರೆ.
ಪೊಲೀಸರನ್ನು ಇಟ್ಟುಕೊಂಡು ರಾಜ್ಯಭಾರಕ್ಕೆ ಸರಕಾರ ನಡೆಸುತ್ತಿರುವ ಯತ್ನ ಬಹುದಿನಗಳವರೆಗೆ ನಡೆಯುವುದಿಲ್ಲ. ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವ ಕುರಿತಂತೆ ಸ್ಪಷ್ಟ ನಿರ್ಧಾರ ತೆಗೆದುಕೊಂಡು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಕಾವೇರಿ ಕಣಿವೆಯಲ್ಲಿ ರೈತರಿಗೆ ಕುಡಿಯುವ ನೀರಿಗೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿನ ಬೆಳೆಗಳಿಗೆ ನೀರು ಬಿಡುವುದು ಯಾವ ನ್ಯಾಯ ಎಂದು ಶಾಸಕ ಪುಟ್ಟಣ್ಣಯ್ಯ ಸರಕಾರವನ್ನು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ