ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಪೂರ್ವನಿಯೋಜಿತ ಸಮಯ ನಿಗದಿಪಡಿಸಿಕೊಂಡು ಬರಬೇಕು. ಪೂರ್ವನಿಯೋಜಿತ ಚಿಂತನೆ ಇಲ್ಲದೆ ಪ್ರಧಾನಿ ಅವರ ಭೇಟಿಗೆ ಅವಕಾಶ ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವನಿಯೋಜಿತ ಸಮಯ ನಿಗದಿಪಡಿಸಿಕೊಂಡು ಬಂದರೆ ಪ್ರಧಾನಿ ಮೋದಿ ಭೇಟಿಗೆ ಸಮಯ ನೀಡುತ್ತಾರೆ. ಆದರೆ, ಪೂರ್ವ ತಯಾರಿ ಇಲ್ಲದೆ ಹೋಗಿ ಪ್ರಧಾನಿ ಅವರು ಭೇಟಿಗೆ ಸಮಯ ನೀಡಲಿಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ ಅಥವಾ ಕೇಂದ್ರ ಸಚಿವರಾದ ಅನಂತ್ ಕುಮಾರ್ ಮತ್ತು ಡಿ.ವಿ.ಸದಾನಂದಗೌಡ ಅವರನ್ನು ಪೂರ್ವನಿಯೋಜಿತವಾಗಿ ಸಂಪರ್ಕಿಸಿದ್ದಲ್ಲಿ ಪ್ರಧಾನಿ ಭೇಟಿಗೆ ಖಂಡಿತ ಅವಕಾಶ ದೊರೆಯುತ್ತಿತ್ತು ಎಂದು ತಿಳಿಸಿದ್ದಾರೆ.
ಒಕ್ಕೂಟ ವ್ಯವಸ್ಥೆ ಕುರಿತು ದೊಡ್ಡದಾಗಿ ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ರಾಜ್ಯದ ಮುಖ್ಯಮಂತ್ರಿ ಸಮಯ ಕೇಳಿದರೆ ನೀಡುವುದಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ