ದೇಶ ಬಹುತೇಕ ಕಾಂಗ್ರೆಸ್ ಮುಕ್ತವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.
ಟಿಪ್ಪು ಸುಲ್ತಾನ್ ಪರವಾಗಿ ಹೋಗಿದ್ದವರೆಲ್ಲಾ ಏನಾಗಿದ್ದಾರೆ ಎನ್ನುವುದನ್ನು ಸಿಎಂ ಸಿದ್ದರಾಮಯ್ಯ ಅರಿತುಕೊಳ್ಳಲಿ. ಟಿಪ್ಪು ಖಡ್ಗವನ್ನು ಖರೀದಿಸಿದ ವಿಜಯ್ ಮಲ್ಯ ದೇಶ ತೊರೆದು ಓಡಿ ಹೋಗಿದ್ದಾರೆ. ಟಿಪ್ಪು ಸುಲ್ತಾನ್ ಧಾರವಾಹಿ ಮಾಡಿದ ಸಂಜಯ್ ಖಾನ್ ಮುಖ ಸುಟ್ಟುಕೊಂಡರು. ಇದೀಗ ಸಿಎಂ ಸಿದ್ದರಾಮಯ್ಯರಿಗೆ ರಾಜ್ಯದ ಜನತೆ ಪ್ಲ್ಯಾಸ್ಟಿಕ್ ಸರ್ಜರಿ ಮಾಡಲಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳು, ಹತ್ಯೆಗಳು ನಡೆದಿವೆ. ಆದರೆ ಸರಕಾರ, ಅಧಿಕಾರಿಗಳು ಕ್ರಮ ಕೈಗೊಳ್ಳದಂತೆ ಒತ್ತಡ ಹೇರುತ್ತಿದೆ, ನಿರಂತರವಾಗಿ ಬಿಜೆಪಿ ಮುಖಂಡರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.
ಮತಾಂಧ, ದೇಶದ್ರೋಹಿ, ಕನ್ನಡಿಗರ ವಿರೋಧಿಯಾಗಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುತ್ತೇವೆ ಎನ್ನುವ ಹಟ ಸರಿಯಲ್ಲ. ಕೂಡಲೇ ಸರಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಕೈ ಬಿಡಬೇಕು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ