ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಲಿಕ್ಯಾಪ್ಟರ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಿಕ್ಕೋಡಿಯಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೆಲಿಪ್ಯಾಡ್ ಮೂಲಕ ಆಗಮಿಸಿದ್ದು, ಇದೇ ಮೊದಲ ಬಾರಿಗೆ ಸುವರ್ಣಸೌಧದೊಳಗೆ ಹ್ಯಾಲಿಪ್ಯಾಡ್ ನಿರ್ಮಿಸಿರುವುದು ವಿಶೇಷವಾಗಿದೆ ಎಂದು ಹೇಳಲಾಗುತ್ತಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸುವರ್ಣಸೌಧದ ಎದರು ಸಾಕಷ್ಟು ಪ್ರತಿಭಟನೆ ನಡೆದಿದ್ದು, ಈ ಪ್ರತಿಭಟನೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಮಳೆಯಿಲ್ಲದೆ ರಾಜ್ಯ ಸಂಕಷ್ಟದ ಸ್ಥಿತಿ ಎದುರಿಸುತ್ತಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸುವರ್ಣಸೌಧದ ಎದರು ಸಾಕಷ್ಟು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರ ಬೇಡಿಕೆಗಳಿಗೆ ಸ್ಪಂದಿಸದೇ ತಮ್ಮದೆ ದರ್ಬಾರ್ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರಲ್ಲಿ ಚರ್ಚೆ ಪ್ರಾರಂಭವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ