Publish Date: Mon, 13 Aug 2018 (15:10 IST)
Updated Date: Mon, 13 Aug 2018 (15:12 IST)
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದಾರೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ.
ಹಾಸನ ದಿಂದ ರಸ್ತೆ ಮಾರ್ಗವಾಗಿ ಸಂಜೆ 4.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಧರ್ಮಸ್ಥಳದಲ್ಲಿ ಮಂಜುನಾಥ್ ಸ್ವಾಮಿ ದರ್ಶನ ಮಾಡಲಿದ್ದಾರೆ . ಬಳಿಕ ಅವರು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ತೆರಳಲಿದ್ದು, ಅಲ್ಲಿ ವಾಸ್ತ್ಯವ್ಯ ಮಾಡಲಿದ್ದಾರೆ. ಆಗಸ್ಟ್ 14 ರಂದು ಬೆಳಿಗ್ಗೆ ಕುಕ್ಕೆ ಸುಬ್ರಮಣ್ಯ ಸ್ವಾಮಿ ದರ್ಶನ ಮಾಡಲಿದ್ದಾರೆ.
ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಬೆಂಗಳೂರುಗೆ ತೆರಳಲಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.