Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಭೂವಿವಾದಗಳಿಂದ ದೂರವಿರಿ: ಪೊಲೀಸರಿಗೆ ಸಿಎಂ ವಾರ್ನಿಂಗ್

ಭೂವಿವಾದಗಳಿಂದ ದೂರವಿರಿ: ಪೊಲೀಸರಿಗೆ ಸಿಎಂ ವಾರ್ನಿಂಗ್
ಬೆಂಗಳೂರು , ಶುಕ್ರವಾರ, 5 ಮೇ 2017 (10:43 IST)
ಭೂ ವಿವಾದಗಳನ್ನು ಇತ್ಯರ್ಥಗೊಳಿಸುವಲ್ಲಿ ಪೊಲೀಸರು ನೇರವಾಗಿ ಅಥವಾ ಪರೋಕ್ಷವಾಗಿ ಭಾಗಿಯಾಗಿರುವುದು ಕಂಡು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
 
ಭೂ ವಿವಾದಗಳನ್ನು ಬಲಪ್ರಯೋಗವಾಗಿ ಇತ್ಯರ್ಥಗೊಳಿಸಲು ಪೊಲೀಸರು ಮಧ್ಯಪ್ರವೇಶಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಪೊಲೀಸರ ವಿರುದ್ಧ ನಿರಂತರವಾಗಿ ದೂರುಗಳು ಬರುತ್ತಿವೆ. ಇದರಿಂದ ಸರಕಾರಕ್ಕೆ ಕೆಟ್ಟಹೆಸರು ಬರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.  
 
ಭೂ ವಿವಾದಗಳಲ್ಲಿ ತಲೆತೂರಿಸುವುದು ಪೊಲೀಸರ ಕೆಲಸವಲ್ಲ. ಪೊಲೀಸರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ. ವೈಟ್‌ಫೀಲ್ಡ್ ಪ್ರದೇಶ ಐಟಿ ಕಾರಿಡಾರ್ ಆಗಿರುವುದರಿಂದ ಉದ್ಯೋಗಿಗಳು ರಾತ್ರಿ ಕೂಡಾ ಕೆಲಸದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ, ಪೊಲೀಸರು ರಾತ್ರಿ ವೇಳೆಯಲ್ಲಿ ಜಾಗರೂಕರಾಗಿರಬೇಕು ಎಂದು ಕರೆ ನೀಡಿದರು.
 
ಪೊಲೀಸರು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜನತೆ ಬಯಸುವುದಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪೊಲೀಸರಿಗೆ ಸಲಹೆ ನೀಡಿದರು.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲ್ಲ: ಎಚ್.ಎಂ.ರೇವಣ್ಣ