Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಜೂನ್ 7 ರ ಬಳಿಕವೂ ಲಾಕ್ ಡೌನ್ ಮುಂದುವರಿಯಬೇಕೋ ಬೇಡವೋ ಎಂಬ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆಯಾಗಲಿದೆ.
ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಇಂದು ಸಿಎಂ ತಮ್ಮ ಗೃಹ ಕಚೇರಿಯಲ್ಲಿ ತಜ್ಞರು, ಪರಿಣಿತರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಲಾಕ್ ಡೌನ್ ಬಗ್ಗೆಯೂ ಚರ್ಚೆ ನಡೆಸುವ ಸಾಧ‍್ಯತೆಯಿದೆ.
ಅದಾದ ಬಳಿಕ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚೆ ನಡೆಸಿ ಲಾಕ್ ಡೌನ್ ಮುಂದುವರಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ವಿಪಕ್ಷಗಳು, ಕೆಲವು ಸಚಿವರು ಲಾಕ್ ಡೌನ್ ಮುಂದುವರಿಸುವ ಬಗ್ಗೆ ಒಲವು ಹೊಂದಿದ್ದಾರೆ. ಹೀಗಾಗಿ ಸಿಎಂ ಯಾವ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ಬಗ್ಗೆ ಕುತೂಹಲ ಕೆರಳಿದೆ.