Webdunia - Bharat's app for daily news and videos

Install App

ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯುತ್ ತಂತಿ ಪ್ರವಹಿಸಿ ಗಂಭೀರ ಗಾಯ

Webdunia
ಮಂಗಳವಾರ, 22 ಆಗಸ್ಟ್ 2023 (19:04 IST)
ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯುತ್ ತಂತಿ ಪ್ರವಹಿಸಿ ಗಂಭೀರ ಗಾಯಗೊಂಡಿರುವ ಘಟನೆ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.ನಗರದ ಕ್ರೈಸ್ಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪ್ರಿಯಾಳನ್ನ ಸಮೀಪದ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.‌ ಮುಖ ಸೇರಿ ದೇಹದ ಇನ್ನಿತರ ಭಾಗಗಳಲ್ಲಿ‌ ವಿದ್ಯುತ್ ಹರಿದ ಹಿನ್ನೆಲೆ ಶೇ.40ರಷ್ಟು ಸುಟ್ಟ ಗಾಯವಾಗಿದೆ.
 
ಇಂದು ಮಧ್ನಾಹ್ಯ ರಸ್ತೆಯೊಂದರಲ್ಲಿ ಬರುತ್ತಿದ್ದ ಕ್ಯಾಂಟರ್ ವಾಹನದ ಚಕ್ರಕ್ಕೆ‌ ಕೆಳಗೆ ಬಿದ್ದಿದ್ದ ವೈರ್ ಸಿಲುಕಿದೆ. ಈ ವೇಳೆ ಲೈಟ್ ಕಂಬಕ್ಕೆ ಆ ವೈರ್  ಸುತ್ತಿಕೊಂಡಿದೆ.‌ ವಾಹನ ಮುಂದಾಗುತ್ತಿದ್ದಂತೆ ಬಿಗಿಯಾಗಿದ್ದು ವಿದ್ಯುತ್ ಕಂಬ ನೆಲಕ್ಕುರುಳಿದೆ. ಈ ವೇಳೆ‌‌ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವಿದ್ಯುತ್ ತಂತಿ ವಿದ್ಯಾರ್ಥಿನಿ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನ ತಕ್ಷಣ ಸಾಗರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಘಟನೆ ಬಳಿಕ ಬೆಸ್ಕಾಂ ಸಿಬ್ಬಂದಿ ಆಗಮಿಸಿ ಶಿಥಿಲಗೊಂಡಿರುವ ಕಂಬವನ್ನು ತೆರವುಗೊಳಿಸಿದ್ದಾರೆ.  ಇನ್ನು ವಿದ್ಯೂತ್ ಪ್ರವಹಿಸಿದ ಹಿನ್ನಲೆ ವಿದ್ಯಾರ್ಥಿನಿಗೆ ಶೇಖಡ 40 ರಷ್ಟು ಸುಟ್ಟ ಗಾಯಗಳಾಗಿವೆ . ಹೀಗಾಗಿ ಪ್ರಥಮ ಚಿಕಿತ್ಸೆಯ ಬಳಿಕ  ಹೆಚ್ಚಿನ ಚಿಕಿತ್ಸೆಗೆ ಸಾಗರ್ ಆಸ್ಪತ್ರೆಯಿಂದ ಸೆಂಟ್ ಜಾನ್ಸ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.  ಇನ್ನು ವೈರ್ ಎಳೆದು ಬೀಳುವಷ್ಟರ ಮಟ್ಟಿಗೆ ಲೈಟ್ ಕಂಬ ಶಿಥಿಲಗೊಂಡಿದೆ ಎಂದರೆ ಬೆಸ್ಕಾಂ ಎಷ್ಟರ ಮಟ್ಟಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ .ಈ ಸಂಬಂಧ ಸುದ್ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments