Publish Date: Tuesday, 23 August 2022 (20:06 IST)
Updated Date: Tuesday, 23 August 2022 (20:08 IST)
ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹನುಮಂತಪುರ ಬಳಿ ನಡೆದಿದೆ. ಮಹೇಶ್ ಮೃತ ದುರ್ದೈವಿಯಾಗಿದ್ದು, ಮಹೇಶ್ ಟೈಲರಿಂಗ್ ಕೆಲಸ ಮಾಡುತ್ತಿದ್ದ. ಕಳೆದ ಎರಡು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಕೆಲ ದಿನಗಳ ಹಿಂದೆ ಗ್ಯಾಂಗ್ರಿನ್ ನಿಂದ ಎರಡು ಕಾಲು ಬೆರಳುಗಳನ್ನ ಕಟ್ ಮಾಡಲಾಗಿತ್ತು. ಇದರಿಂದ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.