ಬೆಂಗಳೂರು (ಆಗಸ್ಟ್ 25); ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಚುರುಕುಗೊಳಿಸುವ ಉದ್ದೇಶದಿಂದ ಈ ಯೋಜನೆಯಡಿ ಕೈಗೆತ್ತಿಕೊಂಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಅಧಿಕಾರಿಗಳಿಗೆ ಇಂದು ಸೂಚನೆ ನೀಡಿದರು.