Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಜೆಪಿ ನಾಯಕರ ಪ್ರಚೋದನೆಯಿಂದಲೇ ಕೋಮುಗಲಭೆ: ಸಿದ್ದರಾಮಯ್ಯ ಆರೋಪ

hief Minister Siddaramaiah

Sampriya

ಮೈಸೂರು , ಶುಕ್ರವಾರ, 20 ಸೆಪ್ಟಂಬರ್ 2024 (14:29 IST)
ಮೈಸೂರು: ರಾಜ್ಯದಲ್ಲಿ ಕೋಮು ಗಲಭೆಗಳಿಗೆ ಬಿಜೆಪಿಯವರೇ ನೇರ ಕಾರಣ. ಬಿಜೆಪಿ ನಾಯಕರ ಪ್ರಚೋದನೆ ಕಾರಣದಿಂದಲೇ ಗಲಾಟೆಗಳು ನಡೆಯುತ್ತಿವೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 60 ಸಾವಿರ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು. ಇದುವರೆಗೆ ಎರಡು ಕಡೆಯಷ್ಟೆ ಗಲಾಟೆ ನಡೆದಿದೆ. ದಾವಣಗೆರೆಯಲ್ಲಿ ಕಲ್ಲು ತೂರಾಟವಷ್ಟೆ ಆಗಿದೆ ಎಂದರು.

 ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಅಂಗಡಿಗಳನ್ನು ಸುಟ್ಟು ಹಾಕಿದ್ದಾರೆ. ಆ ಘಟನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಮುಂಜಾಗ್ರತೆ ವಹಿಸುವಂತೆಯೂ ಸೂಚಿಸಿದ್ದೇನೆ. ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಅಲ್ಲಿನ ಡಿವೈಎಸ್ಪಿ ಹಾಗೂ ಇನ್‌ಸ್ಪೆಕ್ಟರ್‌ ಅಮಾನತು ಮಾಡಿದ್ದೇವೆ ಎಂದು ತಿಳಿಸಿದರು.

ಒಕ್ಕಲಿಗ ಸಮುದಾಯದ ಸಚಿವರು, ಕಾಂಗ್ರೆಸ್‌ ಶಾಸಕರ ನಿಯೋಗ ಬೆಂಗಳೂರಿನಲ್ಲಿ ಶುಕ್ರವಾರ ನನ್ನನ್ನು ಭೇಟಿಯಾಗಿ, ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಮನವಿ ಸಲ್ಲಿಸಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರಿಗೆ ತಿಳಿಸಿದ್ದೇನೆ ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಅವರು ಯಾವತ್ತೂ ಯಾವುದನ್ನೂ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿಲ್ಲ. ಕೇಂದ್ರ ಸಚಿವರಾಗಿ ಸತ್ಯವೋ, ಇಲ್ಲವೋ ಎಂಬುದನ್ನು ತಿಳಿದುಕೊಂಡು ಮಾತನಾಡಬೇಕಲ್ಲವೇ? ಎಂದು ಕೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಸಾಹಿತಿ ಹಂಪ ನಾಗರಾಜಯ್ಯ