ಬೆಳಗಾವಿ : ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ ಆರು ಜನ ನಿಧನರಾಗಿದ್ದು,
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಈಗಾಗಲೇ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಪ್ರಕರಣದ ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದು ಹೇಳಿದರು.