Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಾಜಿ ಸಚಿವ ಎಚ್‌.ವೈ. ಮೇಟಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಮಾಜಿ ಸಚಿವ ಎಚ್‌.ವೈ. ಮೇಟಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ಬೆಂಗಳೂರು , ಸೋಮವಾರ, 21 ಆಗಸ್ಟ್ 2017 (18:09 IST)
ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಚ್.ವೈ.ಮೇಟಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉಮೇಶ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಾಜಿ ಸಚಿವರು ಸಂತ್ರಸ್ಥೆ ವಿಜಯಲಕ್ಷ್ಮಿ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿದ್ದಾರೆ ಎನ್ನುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯಲಕ್ಷ್ಮಿ ಆತ್ಮಹತ್ಯೆ ಪ್ರಯತ್ನ ಕೂಡಾ ಮಾಡಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
 
ಸಂತ್ರಸ್ಥೆ ಮಹಿಳೆ ವಿಜಯಲಕ್ಷ್ಮಿಗೆ ಸರಕಾರ ಸೂಕ್ತ ರಕ್ಷಣೆ ಮತ್ತು ಪರಿಹಾರ ಒದಗಿಸಿಕೊಡಬೇಕು. ಮಾಜಿ ಸಚಿವ ಮೇಟಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
 
ಮಾಜಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜೆಡಿಎಸ್ ನಾಯಕಿ ಮಂಜುಳಾ ಉಮೇಶ್ ಎಚ್ಚರಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ವಿರುದ್ಧ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿಲ್ಲ: ಉಗ್ರಪ್ಪ