ವಿಮಾನ ನಿಲ್ದಾಣ ಕಾಮಗಾರಿ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ತಾಕೀತು

Webdunia
ಶನಿವಾರ, 25 ಆಗಸ್ಟ್ 2018 (19:09 IST)
ಕಲಬುರಗಿ ವಿಮಾನ ನಿಲ್ದಾಣವನ್ನು ಪ್ರಸಕ್ತ ವರ್ಷದ ಅಂತ್ಯದೊಳಗಾಗಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸಿದ್ಧಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಸಂಪೂರ್ಣವಾಗಿ ಸೆಪ್ಟೆಂಬರ್  ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕೆಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುತ್ತಿಗೆದಾರರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಎಲ್ಲ ಕಟ್ಟಡ ಕಾಮಗಾರಿಗಳನ್ನು ಸೆಪ್ಟೆಂಬರ್ 10ರೊಳಗಾಗಿ ಪೂರ್ಣಗೊಳಿಸಿ ಲೋಕೋಪಯೋಗಿ ಇಲಾಖೆಗೆ ಒಪ್ಪಿಸಬೇಕು. ಈ ಕಟ್ಟಡಗಳಲ್ಲಿ ಸೆಪ್ಟೆಂಬರ್ ಅಂತ್ಯದೊಳಗಾಗಿ ಅವಶ್ಯಕ ಉಪಕರಣ, ಸಾಮಗ್ರಿಗಳನ್ನು ಅಳವಡಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದರು.

ವಿಮಾನ ನಿಲ್ದಾಣಕ್ಕೆ ವಿದ್ಯುತ್ ಒದಗಿಸುವ ಕಾಮಗಾರಿ ಪ್ರಗತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಾದೇಶಿಕ ಆಯುಕ್ತರು, ವಿದ್ಯುತ್ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು. ವಿಮಾನ ನಿಲ್ದಾಣಕ್ಕೆ ವಿದ್ಯುತ್ ಸಂಪರ್ಕ ದೊರೆತಾಗ ಮಾತ್ರ ಎಲ್ಲ ಕಾಮಗಾರಿಗಳನ್ನು ಹಾಗೂ ಉಪಕರಣಗಳನ್ನು ಪರೀಕ್ಷಿಸಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಸದಾ ಸಂಪರ್ಕದಲ್ಲಿದ್ದು, ಕಾಮಗಾರಿಗಳ ಗುಣಮಟ್ಟ ಕಾಪಾಡುವ ಜೊತೆಗೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಮುತುವರ್ಜಿ ವಹಿಸಬೇಕೆಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments