Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಶೇಷಾದ್ರಿ ರಸ್ತೆಯಲ್ಲಿ ವೈಟ್ಟಾಪಿಂಗ್ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಮುಕ್ತಾಯ

ಶೇಷಾದ್ರಿ ರಸ್ತೆಯಲ್ಲಿ ವೈಟ್ಟಾಪಿಂಗ್ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಮುಕ್ತಾಯ
bangalore , ಮಂಗಳವಾರ, 14 ಜೂನ್ 2022 (19:13 IST)
ಬೆಂಗಳೂರು ನಗರದ ಅತಿ ಪ್ರಮುಖ ರಸ್ತೆಯಾದ ಶೇಷಾದ್ರಿ ರಸ್ತೆಯಲ್ಲಿ ಕೈಗೆತ್ತಿಕೊಂಡಿದ್ದ ವೈಟ್ಟಾಪಿಂಗ್ ಕಾಮಗಾರಿಯನ್ನು ನಿಗಧಿತ ಅವಧಿಯೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಶೇಷಾದ್ರಿ ರಸ್ತೆಯ ವೈಟ್ಟಾಪಿಂಗ್  ಕಾಮಗಾರಿಯನ್ನು ಕೈಗೊಳ್ಳಲು ಉಲ್ಲೇಖಿತ ಪತ್ರದಂತೆ 60 ದಿನಗಳ ಅವಧಿಯಲ್ಲಿ ಪೂರ್ಣಗೊಳಿಸುವ ಷರತ್ತುಗೊಳಪಟ್ಟು ಸಂಚಾರಿ ಪೊಲೀಸರಿಂದ ಅನುಮತಿಯನ್ನು ಪಡೆಯಲಾಗಿತ್ತು. ಅದರಂತೆ ಸ್ಥಳೀಯ ಸಂಚಾರಿ ಪೊಲೀಸ್ ರವರ ಸಹಕಾರದೊಂದಿಗೆ ಶೇಷಾದ್ರಿ ರಸ್ತೆಯಲ್ಲಿ ಕೆ.ಆರ್ ವೃತ್ತದಿಂದ ಸುಬ್ಬಣ್ಣ ವೃತ್ತದವರೆಗಿನ ಸಂಚಾರವನ್ನು ನಿರ್ಬಂಧಗೊಳಿಸಿ, ಸುಬ್ಬಣ್ಣ ವೃತ್ತ ದಿಂದ ಕೆ.ಆರ್ ವೃತ್ತದ ಕಡೆಗಿನ ಸಂಚಾರಕ್ಕೆ ಯಾವುದೇ ತೊಡಕಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ದಿನಾಂಕ: 04.04.2022ರಂದು ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ವೈಟ್ಟಾಪಿಂಗ್ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಮುಕ್ತಾಯವಾಗಿದ್ದು ಮುಖ್ಯ ಆಯುಕ್ತರು ಅಭಿನಂದಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿವೆ 600 ನಕಲಿ ಸಾಲ ನೀಡುವ ಆಪ್: ಆರ್ ಬಿಐ