ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯಾ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಟ್ಟು 2,270 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,533 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 67.53 ರಷ್ಟು ಫಲಿತಾಂಶ ಬಂದಿರುತ್ತದೆ.ಬಿಬಿಎಂಪಿಯ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಭಿನಂದನೆ ತಿಳಿಸಿದ್ದಾರೆ.