Publish Date: Thu, 20 Apr 2023 (07:11 IST)
Updated Date: Thu, 20 Apr 2023 (07:13 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್ ಮಾಡಿದ್ದು, 4 ಕ್ಷೇತ್ರಗಳಿಗೆ (ಒಂದು ಕ್ಷೇತ್ರ ಬದಲಾವಣೆ ಸೇರಿ) ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.
ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನ ಬದಲಾವಣೆ ಮಾಡಿದೆ.
ಶಿಗ್ಗಾಂವಿ ಕ್ಷೇತ್ರದಿಂದ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು, ಆದ್ರೆ ಬುಧವಾರ ಬಿಡುಗಡೆಯಾದ 5ನೇ ಪಟ್ಟಿಯಲ್ಲಿ ಶಿಗ್ಗಾಂವಿಗೆ ಯಾಸೀರ್ ಅಹ್ಮದ್ ಖಾನ್ ಪಠಾನ್ ಅವರನ್ನ ಅಭ್ಯರ್ಥಿಯಾಗಿ ಘೋಷಿಸಿದೆ.