ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತೆಗೆದುಕೊಂಡ ನಿರ್ಧಾರವೊಂದು ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಸುಮಲತಾ ಅಂಬರೀಶ್ ಇಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅವರ ಪ್ರವಾಸ ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸುಮಲತಾ ಅಂಬರೀಶ್ ಅವರ ಈ ನಿರ್ಧಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಇದರಿಂದಾಗಿ ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.