ಮಂಡ್ಯ : ಮಂಡ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಎಲ್.ಆರ್.ಶಿವರಾಮೇಗೌಡ ಅವರನ್ನು ಬಿಜೆಪಿಯ ಅಭ್ಯರ್ಥಿ ಅಂತಾ ಕರಪತ್ರದಲ್ಲಿ ತಪ್ಪಾಗಿ ಮುದ್ರಿಸುವುದರ ಮೂಲಕ ಎಡವಟ್ಟು ಮಾಡಿದ್ದು, ಇದೀಗ ಈ ವಿಚಾರ ಬಿಜೆಪಿಯವರ ಆಕ್ರೋಶಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ದಲಿತರ ಹಾಗೂ ರೈತರ ಪರ ಕಾಳಜಿಯನ್ನು ಬೆಂಬಲಿಸುವುದಕ್ಕಾಗಿ ಬಿಜೆಪಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಮತ ನೀಡಲು ಮನವಿ ಎಂದು ಅನಂತರಾಯಪ್ಪ ಅವರು ಮುದ್ರಿಸಿದ್ದಾರೆ. ಈ ಕರಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯವರು ಜನರಲ್ಲಿ ತಪ್ಪು ಭಾವನೆ ಮೂಡಿಸಲು, ಬಿಜೆಪಿ ಮತಗಳನ್ನು ಸೆಳೆಯಲು ಜೆಡಿಎಸ್ ಮುಖಂಡರು ಈ ರೀತಿ ಮಾಡಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗ ತಕ್ಷಣ ಎಲ್.ಆರ್.ಶಿವರಾಮೇಗೌಡರ ಉಮೇದುವಾರಿಕೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ