ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರೈತ ವಿರೋಧಿ, ಜನ ವಿರೋಧಿಯಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ 224 ಕ್ಷೇತ್ರಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ರೈತರ ಸಂಪೂರ್ಣ ಸಾಲ ಮಾಡಿ ಅಂದ್ರೆ ಸ್ವಲ್ಪ ಸಾಲ ಮನ್ನಾ ಮಾಡಿದೆ. ಸಾಲ ಮನ್ನಾ ಸರಕಾರದ ಒಂದು ನಾಯಕವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ 18 ಬಿಜೆಪಿ ನಾಯಕರ ಹತ್ಯೆಯಾಗಿದೆ. ಹಲವಾರು ಸಾಮಾಜಿಕ ಕಾರ್ಯಕರ್ತರ ಹತ್ಯೆಗಳಾಗುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಕಿಡಿಕಾರಿದರು.
ಕೇಂದ್ರದಲ್ಲಿ ಎನ್‌ಡಿಎ ಸರಕಾರ ಅಧಿಕಾರದಲ್ಲಿದೆ. ಒಂದೊಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲೇಬೇಕಾಗಿದೆ. ಆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಒಂದಾಗಿ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಕಿವಿಮಾತು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.