Publish Date: Sun, 24 Dec 2017 (09:34 IST)
Updated Date: Sun, 24 Dec 2017 (09:38 IST)
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಘಟನೆ ನಡೆದಿದ್ದು, ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಕೊಪ್ಪದ ಬಿಜೆಪಿ ಕಚೇರಿ ಮೇಲೆ ದಾಂಧಲೆ ನಡೆದಿದೆ.
ಬಿಜೆಪಿ ಕಾರ್ಯಕರ್ತ ರಾಕೇಶ ಮೇಲೆ ಹಲ್ಲೆಯಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯನ್ನು ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಘಟನೆಯ ನಂತರ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶಾಸಕ ಡಿ.ಎನ್.ಜೀವರಾಜ ಅವರ ನೇತೃತ್ವದಲ್ಲಿ ಬಿಜೆಪಿಯವರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.