ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ಕುರಿತು ಪರೋಕ್ಷವಾಗಿ ಲೇವಡಿ ಮಾಡಿರುವ ಮಾಜಿ ಸಂಸದ ಎಚ್.ವಿಶ್ವನಾಥ್, ಕಾಂಗ್ರೆಸ್ ಪಕ್ಷ ಅಧೋಗತಿಗೆ ಇಳಿದಿಲ್ಲ. ಪಕ್ಷದಲ್ಲಿರುವ ನಾಯಕರು ಅಧೋಗತಿಗೆ ಇಳಿದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ಕುರಿತು ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ವಿಳಂಬ ಮಾಡಿದ್ದು ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. ಕಾಂಗ್ರೆಸ್ ಬಡವರ ಧ್ವನಿಯಾಗಿದ್ದು, ಇತ್ತೀಚಿಗೆ ಪಕ್ಷ ಸೇರುತ್ತಿರುವ ನಾಯಕರಿಂದ ಪಕ್ಷ ಅಧೋಗತಿಗೆ ಇಳಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಏಕಾಏಕಿ 500, 1000 ಮುಖಬೆಲೆಯ ನೋಟು ನಿಷೇಧ ಮಾಡಿದ್ದು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಇದಕ್ಕೆ ಪ್ರಧಾನಿ ಮೋದಿ ಅವರೇ ನೇರ ಹೊಣೆ. ಸಂಸತ್ ಅಧಿವೇಶನ ಸುಗಮವಾಗಿ ನಡೆಸಲು ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದ್ದು, ಬಿಜೆಪಿ ಹಿರಿಯ ಮುಖಂಡ ಅಡ್ವಾನಿ ಅವರು ಬೇಸರಗೊಂಡಿರುವುದು ನಿದರ್ಶನ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ