ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುವ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವು ಪಡೆಯದೆ ಕೇಂದ್ರದ ಸಿಆರ್‌ಪಿಎಫ್ ಭದ್ರತಾ ಪಡೆಗಳ ಸಹಾಯ ಪಡೆದಿದ್ದಾರೆ ಎಂದು ಕಾಂಗ್ರೆಸ್, ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.
ಕಾನೂನಿನ ಪ್ರಕಾರ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವು ಪಡೆಯಬೇಕಾಗುತ್ತದೆ. ಆದರೆ, ಸ್ಥಳೀಯ ಪೊಲೀಸರ ನೆರವು ಪಡೆಯದೇ ಕೇಂದ್ರದ ಭದ್ರತಾ ಪಡೆಗಳ ನೆರವು ಪಡೆದಿರುವುದು ಕಾನೂನುಬಾಹಿರ ಎಂದು ಕಿಡಿಕಾರಿದೆ.
ಸಿಎಂ ಸಿದ್ದರಾಮಯ್ಯ, ಐಟಿ ದಾಳಿಯ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸರಕಾರದ ಕುಮ್ಮಕ್ಕಿನಿಂದಾಗಿ ಕೇಂದ್ರ ಭದ್ರತಾ ಪಡೆಗಳ ನೆರವು ಪಡೆದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ ದಾಳಿಯಿಂದಾಗಿ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.