Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಾಂಗ್ರೆಸ್ ಸಂಸ್ಕೃತಿ ಕೊನೆಗೊಳಿಸಿ, ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ನರೇಂದ್ರಮೋದಿ ಕರೆ

ಕಾಂಗ್ರೆಸ್ ಸಂಸ್ಕೃತಿ ಕೊನೆಗೊಳಿಸಿ, ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ನರೇಂದ್ರಮೋದಿ ಕರೆ
ಬೆಂಗಳೂರು , ಭಾನುವಾರ, 4 ಫೆಬ್ರವರಿ 2018 (21:38 IST)

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಸಂಸ್ಕೃತಿ ಕೊನೆಗೊಳಿಸಿ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ  ಬಿಜೆಪಿ ಅಧಿಕಾರಕ್ಕೆ ಬರಲು ಬಹಳಷ್ಟು ದಿನ ಕಾಯಬೇಕಾಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಕಾಂಗ್ರೆಸ್ ಮುಕ್ತ ಕರ್ನಾಟಕದ  ಜೊತೆ ಭ್ರಷ್ಟಾಚಾರ ಮುಕ್ತ ಕರ್ನಾಟಕವಾಗುವ ಸಮಯ ಬಂದಿದೆ. ಕರ್ನಾಟಕ ಸರ್ಕಾರ ಭ್ರಷ್ಟಾಚಾರದಲ್ಲಿ ದಾಖಲೆಗಳನ್ನು ಮಾಡಿದ್ದು, ಹಲವು ಸಚಿವರ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ 10  ಪರ್ಸೆಂಟ್ ಸರ್ಕಾರವಾಗಿದ್ದು, ಕರ್ನಾಟಕ  ಸರ್ಕಾರದಲ್ಲಿ ಲಂಚ ನೀಡದೇ ಯಾವುದೇ ಕೆಲಸವಾಗುವುದಿಲ್ಲ ಎಂದು ಕೇಳಿದ್ದೇನೆ. ಇಲ್ಲಿ ಬಿಲ್ಡರ್, ವರ್ಗಾವಣೆ ಹಾಗೂ ಮರಳು ಮಾಫಿಯಾದ ನಂಗಾನಾಚ್ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದ್ದು, ಬಿಜೆಪಿ ಕಾರ್ಯಕರ್ತರ ಕೊಲೆಗಳು ನಡೆಯುತ್ತಿವೆ. ಇದಕ್ಕೆ ಮತದಾನದ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಕರೆ ನೀಡಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅನುದಾನವನ್ನು ಕರ್ನಾಟಕಕ್ಕೆ ನೀಡಿದೆ. ಆದರೆ  ಅನುದಾನ ಸಮರ್ಪಕವಾಗಿ  ಕರ್ನಾಟಕದಲ್ಲಿ  ಬಳಕೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ರೈತರಿಗಾಗಿ   ಕೇಂದ್ರ ಜಾರಿಗೆ ತಂದ ಯೋಜನೆಗಳು ಕರ್ನಾಟಕದಲ್ಲೇ ಹೆಚ್ಚು ಯಶಸ್ವಿಯಾಗಲಿವೆ. ಏಕೆಂದರೆ ಯಡಿಯೂರಪ್ಪನವರ ಹೃದಯದಲ್ಲಿ ರೈತರ ಪರ ಪ್ರೀತಿ ಬಲವಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ನಾಯಕರಿಂದ ಸನ್ಮಾನ