ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಮಾತನಾಡಲು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ಗೆ ಯಾವುದೇ ನೈತಿಕತೆಯಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್. ಅವರು ಮೃತಪಟ್ಟಾಗ ಶವಸಂಸ್ಕಾರಕ್ಕೂ ಆಗಿನ ಕಾಂಗ್ರೆಸ್ ನಾಯಕರು ಜಾಗ ನೀಡಲಿಲ್ಲ. ಅಂತಹ ಕಾಂಗ್ರೆಸ್ ನಾಯಕರು ಇದೀಗ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ದಲಿತರ ಮನೆಯಲ್ಲಿ ಬಿಜೆಪಿ ನಾಯಕರು ಊಟ ಮಾಡಿರುವುದನ್ನು ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಕೂಡಾ ಬಿಜೆಪಿ ನಾಯಕರು ದಲಿತರ ಮನೆಯಲ್ಲಿ ಊಟ ಮಾಡಿರುವುದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷ ದಲಿತರು, ಶೋಷಿತರು, ಹಿಂದುಳಿದ ವರ್ಗದವರಿಗಾಗಿ ಏನೂ ಮಾಡಿಲ್ಲ. ಕೇವಲ ವೋಟ್ ಬ್ಯಾಂಕ್‌ಗಾಗಿ ಬಳಸಿಕೊಳ್ಳುತ್ತಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.