Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದ ಮತ್ತೊಂದು ವಿಕೆಟ್ ಪತನ

Webdunia
ಬುಧವಾರ, 22 ಮಾರ್ಚ್ 2017 (16:57 IST)
ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.  
 
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದ ನಂತರ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿಯೇ ಪಕ್ಷಾಂತರ ಪರ್ವ ಆರಂಭವಾದಂತಾಗಿದೆ.
 
ಜಿಲ್ಲೆಯ ಮದ್ದೂರು ತಾಲೂಕಿನ ಕಿರಂಗೂರು ಗ್ರಾಮದಲ್ಲಿ ತಮ್ಮ ಬೆಂಬಲಿಗರ ಜೊತೆ ಮಾತನಾಡಿದ ಸುರೇಶ ಗೌಡ, ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಜೆಡಿಎಸ್ ಸೇರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.
 
ಕಾಂಗ್ರೆಸ್ ಪಕ್ಷದ ನಾಯಕರು ನಿರ್ಲಕ್ಷ್ಯ ಧೋರಣೆಯಿಂದಾಗಿ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿಲ್ಲ. ಆದ್ದರಿಂದ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದಾರೆ.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರೊಂದಿಗೆ ಚರ್ಚಿಸಿದ್ದು ಶೀಘ್ರದಲ್ಲಿಯೇ ಜೆಡಿಎಸ್ ಪಕ್ಷ ಸೇರಲಿರುವುದಾಗಿ ಮಾಜಿ ಶಾಸಕ ಸುರೇಶ್‌ಗೌಡ ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments