Publish Date: Tue, 30 Aug 2022 (21:04 IST)
Updated Date: Tue, 30 Aug 2022 (21:06 IST)
ನಿಮ್ಮ ಪ್ರಣಾಳಿಕೆಯಲ್ಲಿ ಸಹಕಾರಿ - ರಾಷ್ಟ್ರೀಕೃತ ಬ್ಯಾಂಕಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಿರಿ.ಆದರೆ,ಡಬಲ್ ಎಂಜಿನ್ ಸರ್ಕಾರದಿಂದ ರೈತರ ಸಾಲ ಮನ್ನಾ ಸಾಧ್ಯವಾಗಲಿಲ್ಲ.ರೈತರ ಆದಾಯವೂ ದ್ವಿಗುಣವಾಗಲಿಲ್ಲ,ಆಗಿದ್ದು ಬೆಲೆ ಏರಿಕೆ ಮಾತ್ರ ಎಂದು ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕಾಸ್ತ್ರ ಪ್ರಯೋಗಮಾಡಿದೆ.
ಹೊಣೆಗೇಡಿತನ ಏಕೆ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ ಕೇಳಿದೆ.ನಿಮ್ಮ ಹತ್ತಿರ ಉತ್ತರ ಇದ್ಯಾ ? ಎಂದು ಹ್ಯಾಶ್ ಟ್ಯಾಗ್ ಬಳಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.