Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೊಸಪೇಟೆ ಕಾರ್ಯಕಾರಿಣಿ ಸಭೆ ನಮಗೆ ಮತ್ತಷ್ಟು ಪ್ರೇರಣೆ ಕೊಟ್ಟಿದೆ. ಸರ್ಕಾರ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿ ಕಾಪಾಡ್ತಿದೆ. ಸಿಎಂ ಒಳ್ಳೊಳ್ಳೆಯ ಕೆಲಸಗಳನ್ನು ಮಾಡ್ತಿದ್ದಾರೆ. ಕಾಂಗ್ರೆಸ್ ಜನರಿಗೆ ತಪ್ಪು ಮಾಹಿತಿ ಕೊಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮತೀಯವಾದದ ಹೆಸರಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡ್ತಿದೆ. ಡಿಜೆ ಹಳ್ಳಿ ಕೆಜಿ ಹಳ್ಳಿ, ಹರ್ಷ ಕೊಲೆ ಪ್ರಕರಣ, ಹಿಜಾಬ್, ಹುಬ್ಬಳ್ಳಿ ಪ್ರಕರಣಗಳಲ್ಲಿ ಮತೀಯವಾದ ಅನುಸರಿಸ್ತಿದೆ. ಕಾಂಗ್ರೆಸ್ನವ್ರು ಅಧಿಕಾರದಲ್ಲಿ ಇಲ್ಲ ಅಂದ್ರೆ ಚಡಪಡಿಸ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ನಿಂದ ಅರಾಜಕತೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದರು.