Select Your Language

Notifications

webdunia
webdunia
webdunia
webdunia

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

R Ashok

Sampriya

ಬೆಂಗಳೂರು , ಬುಧವಾರ, 21 ಜನವರಿ 2026 (19:53 IST)
ಬೆಂಗಳೂರು: ಕಾಂಗ್ರೆಸ್  ಸರ್ಕಾರ ವಿಶೇಷ ಅಧಿವೇಶನ  ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಯತ್ನಿಸುತ್ತಿದೆ, ಆದರೆ ಯೋಜನೆಯ ವಿರುದ್ಧದ ನಿರ್ಣಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌  ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಯಿಂದ ನಿಜವಾದ ಫಲಾನುಭವಿಗಳಿಗೆ ಕೂಲಿ ಸಿಗುವಂತೆ ಮಾಡಿದ್ದಾರೆಂದು ಹೇಳಿದರು.

ಇನ್ನೂ ಸಿಎಜಿ ವರದಿಯಲ್ಲೂ ಉದ್ಯೋಗ ಖಾತರಿ ಯೋಜನೆಯಲ್ಲಿ ಸಾವಿರಾರು ಕೋಟಿ  ಅಕ್ರಮ ನಡೆದಿರುವುದು ಸಾಬೀತಾಗಿದೆ. 

ಇನ್ನೂ ಈ ಯೋಜನೆ ಬಗ್ಗೆ ತಿಳಿಯಲು ಹಾಗೂ ಅರಿವು ಮೂಡಿಸಲು ಎಲ್ಲ ಶಾಸಕರು, ಮುಖಂಡರ ಜೊತೆ ಸಭೆ ನಡೆಯಲಿದೆ. 

ಈ ಬಗ್ಗೆ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಯೋಜನೆ ಕುರಿತ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುತ್ತೇನೆ ಎಂದಿದ್ದಾರೆ. ಇನ್ನೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಕೂಡಾ ಬರಲಿದ್ದಾರೆ ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ಶಾಲಾ ಬಾಲಕಿಯರಿಗೆ ಮುಟ್ಟಿನ ಕಪ್‌, ಶಿಕ್ಷಕರಿಗೆ, ತಾಯಂದಿರಿಗೆ ತರಬೇತಿಗೆ ಸರ್ಕಾರ ನಿರ್ಧಾರ