Publish Date: Fri, 09 Jun 2023 (10:06 IST)
Updated Date: Fri, 09 Jun 2023 (10:55 IST)
ಬೆಂಗಳೂರು : ಕರ್ನಾಟಕದ ಚುನಾವಣೆಯಲ್ಲಿ ಸೋತ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿ ಸೋಲಿಗೆ ಕಾರಣ ಹುಡುಕುವ ಪ್ರಯತ್ನ ನಡೆಸಿದೆ. ಸಭೆಯಲ್ಲಿ ಕಾಂಗ್ರೆಸ್ನ ಗ್ಯಾರಂಟಿಗಳಿಂದಲೇ ಸೋಲಾದ ಬಗ್ಗೆ ಹೆಚ್ಚಿನವರು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿಯ ಪ್ರಣಾಳಿಕೆ ಕಾಂಗ್ರೆಸ್ನ ಪ್ರಣಾಳಿಕೆಯಷ್ಟು ಚೆನ್ನಾಗಿರಲಿಲ್ಲ. ಕಾಂಗ್ರೆಸ್ ನಾಯಕರು ಪ್ರಚಾರದ ಕಡೆ 5 ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು. ನಮ್ಮ ಭರವಸೆಗಳು ಜನರನ್ನು ತಲುಪುವಲ್ಲಿ ವಿಫಲವಾಗಿದ್ದೆ ಸೋಲಿಗೆ ಪ್ರಮುಖ ಕಾರಣ ಎಂದು ನಾಯಕರು ತಿಳಿಸಿದ್ದಾರೆ.
ಸ್ಥಳೀಯ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ನೀಡಿದ್ದು ಸಹ ಚುನಾವಣೆ ಸೋಲಿಗೆ ಪ್ರಮುಖ ಕಾರಣವಾಗಿದೆ. ಸ್ಥಳೀಯ ಕ್ಷೇತ್ರಗಳಲ್ಲಿ ಸಚಿವರಾಗಿದ್ದಂತವರಿಗೆ ಮೂಲ ಜಿಲ್ಲೆಗಳ ಉಸ್ತುವಾರಿ ಕೊಡಬೇಕಿತ್ತು. ಅದು ಬಿಟ್ಟು ಬೇರೆ ಯಾವುದೋ ಜಿಲ್ಲೆಗೆ ಉಸ್ತುವಾರಿ ನೀಡಲಾಗಿತ್ತು ಎಂದು ಕೆಲವರು ಬೇಸರ ಹೊರಕಾಕಿದ್ದಾರೆ.