ಮಂಗಳೂರು : ಕರ್ನಾಟಕದ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಹಿಂದುತ್ವದ ಪ್ರಬಲ ಅಸ್ತ್ರ ಪ್ರಯೋಗಿಸಿದ್ದರೆ, ಇದೀಗ ಕಾಂಗ್ರೆಸ್ ತಮ್ಮ ಬಳಿ ಇರುವ ಹಳೆಯ ಪ್ರಬಲ ಅಸ್ತ್ರವೊಂದನ್ನು ಬಳಸಲು ನಿರ್ಧಾರ ಮಾಡಿದೆ.
2013 ರ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರದ ಚುನಾವಣೆ ಯಲ್ಲಿ ಕಾಂಗ್ರೆಸ್ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಆದರೆ 2018 ರ ಚುನಾವಣೆಯಲ್ಲಿ ಕಾಂಗ್ರೆಸ್ 2 ಸ್ಥಾನದಲ್ಲಿ ಗೆಲುವು ಸಾಧಿಸುವುದೇ ಕಷ್ಟಕರ ಎಂಬುದು ಕಾಂಗ್ರೆಸ್ ಸಮೀಕ್ಷೆಯಿಂದ ತಿಳಿದು ಬಂದಿದ್ದು, ಅದಕ್ಕಾಗಿ ಪ್ರಬಲ ಅಸ್ತ್ರವಾದ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಬಳಸಲು ಮುಂದಾಗಿದೆ.
ಮಂಗಳೂರಿಗೆ ಬಂದಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರಾವಳಿಯಲ್ಲಿ ಪಕ್ಷ ಗೆಲ್ಲಿಸಲು ಈ ನಿರ್ಧಾರ ತೆಗೆದುಕೊಂಡಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಒಪ್ಪಿಕೊಂಡಿದ್ದಾರೆ. ಒಟ್ಟಾರೆ ರಾಹುಲ್ ಗಾಂಧಿ ಅವರು ಜನಾರ್ದನ ಪೂಜಾರಿ ಅವರ ಮನವೊಲಿಸಿ ಪಕ್ಷದ ಗೆಲುವಿನ ಹೊಣೆಯನ್ನು ಅವರ ಮೇಲೆ ಹೊರಿಸಿದ್ದಾರೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ