ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಯಡಿ ನಡೆಯುವ ಒಂದು ಪಕ್ಷ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಯನ್ನು ಗೌರವಿಸುತ್ತದೆ. ನಮ್ಮ ರಾಷ್ಟ್ರೀಯ, ರಾಜ್ಯ, ಜಿಲ್ಲಾ- ಮಂಡಲ ಅಧ್ಯಕ್ಷರ ಆಯ್ಕೆಯು ಕೂಡ ಪ್ರಜಾತಂತ್ರ ವ್ಯವಸ್ಥೆಯ ಅಡಿಯಲ್ಲೇ ನಡೆಯುತ್ತಿದೆ.ಇವತ್ತು ವಿಧಾನಸಭಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕೂಡ ಪ್ರಜಾತಂತ್ರ ವ್ಯವಸ್ಥೆಯ ರೀತಿಯಲ್ಲಿ ನಡೆಯುತ್ತಿದೆ. ವರ್ಷದ 365 ದಿನವೂ ಕೆಲಸ ಮಾಡುವ ಕಾರ್ಯಕರ್ತರು ನಮ್ಮ ಬೂತ್ ಮಟ್ಟದಲ್ಲಿ ಇದ್ದಾರೆ ಎಂದ ಅವರು, ಕಾಂಗ್ರೆಸ್ ಪಕ್ಷದವರು ಚುನಾವಣೆಗೆ ಸಮೀಪದ ಕೊನೆಯ 2 ತಿಂಗಳು ಮಾತ್ರ ಎಂದು ತಿಳಿಸಿದರು.
ಕಾಂಗ್ರೆಸ್‍ನವರಿಗೆ ಕೇಡರ್ ಇಲ್ಲ ಲೀಡರ್‍ಗಳೂ ಇಲ್ಲ. ಆದರೆ, ಬಿಜೆಪಿ ವರ್ಷವಿಡೀ, 5 ವರ್ಷವೂ ಕೆಲಸ ಮಾಡುತ್ತದೆ. ಸರಕಾರ ಇರಲಿ ಅಥವಾ ಇಲ್ಲದೇ ಇರಲಿ, ನಮ್ಮ ಕಾರ್ಯಕರ್ತರು ಕೆಲಸ ಮಾಡುವವರು. ಸರಕಾರ ಇದ್ದಾಗ ನಮ್ಮ ಕಾರ್ಯಕರ್ತರು ಯೋಜನೆಗಳನ್ನು ಜನರಿಗೆ ತಲುಪಿಸುತ್ತಾರೆ. ಸರಕಾರ ಇಲ್ಲದಿದ್ದರೆ ಅವ್ಯವಸ್ಥೆ, ಜನರ ಬೇಡಿಕೆಗಳಿಗಾಗಿ ಹೋರಾಟ ಮಾಡುತ್ತಾರೆ ಎಂದ್ರು.....ಇನ್ನೂ ಅಭ್ಯರ್ಥಿ ಆಯ್ಕೆಯಲ್ಲಿ ನಮಲ್ಲಿ ಯಾವುದೇ ಗೊಂದಲ ಇಲ್ಲ ಗೊಂದಲ ಇರೋದು ಕಾಂಗ್ರೆಸ್ ನಲ್ಲಿ ಮತ್ತು ಜೆಡಿಎಸ್ ನಲ್ಲಿ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ರು