ಮುಖ್ಯಮಂತ್ರಿಯಾಗಿ ನಾನೇನು ಮಾಡಲಿ. ಎಸ್.ಎಂ.ಕೃಷ್ಣ ಅವರ ಮನವೊಲಿಸುವ ಕೆಲಸ ಹೈಕಮಾಂಡ್ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಕಡೆಗಣಿಸಿಲ್ಲ. ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿರುವ ಕುರಿತು ಎಲ್ಲಿಯೂ ಹೇಳಿಕೆ ನೀಡಿಲ್ಲ. ಹಾಗಂತ ಯಡಿಯೂರಪ್ಪ ಮಾತ್ರ ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಹಾಗೂ ಈಶ್ವರಪ್ಪ ಸೇರಿ ಬಿಜೆಪಿ ಪಕ್ಷ ನಿರ್ನಾಮ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ತಿರುಗೇಟು ನೀಡಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಜನವರಿ 28ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ರಾಜಕೀಯ ಪಕ್ಷಗಳು ಕೃಷ್ಟ ಅವರಿಗೆ ಗಾಳ ಹಾಕುತ್ತಿದ್ದು, ಅವರು ಯಾವ ಪಕ್ಷ ಸೇರ್ಪಡೆಯಾಗುತ್ತಾರೆ ಎಂದು ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ