ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಾಗ್ತಿದೆ. ಈ ಮಧ್ಯೆ ಟಿಕೆಟ್ ಆಕಾಂಕ್ಷಿಗಳ ಬೆಳವಣಿಗೆಗಳು ಗರಿಗೆದರಿದ್ದು, ಟಿಕೆಟ್ ಪಡೆಯಲು ತೆರೆಮರೆಯಲ್ಲೇ ಕಸರತ್ತು ನಡೆಸುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಮಾಜಿ ಸಂಸದ ಮುದ್ದಹನುಮೇಗೌಡ ಭೇಟಿಯಾಗಿ ಮಾತುಕತೆ ನಡೆದಿದ್ದಾರೆ. ಕುಣಿಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮುದ್ದಹನುಮೇಗೌಡರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಾದ್ರೂ ಟಿಕೆಟ್ ಕೊಡುವಂತೆ ಒತ್ತಡ ಹಾಕಿದ್ದಾರಂತೆ. ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಮುದ್ದಹನುಮೇಗೌಡ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದೇನೆ. ಒಂದು ಪಕ್ಷ ಬಿಡಲು ಬಲವಾದ ಕಾರಣ ಅಂದ್ರೆ ಅದು ಪಕ್ಷದಿಂದ ಆಗಿರಬೇಕು ಅಥವಾ ನನ್ನಿಂದ ಆಗಿರಬೇಕು. ನನ್ನಿಂದ ಅಂತೂ ಯಾವುದೇ ತಪ್ಪಾಗಿಲ್ಲ. ನಾಲ್ಕು ಬಾರೀ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯು ಇದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.