Webdunia - Bharat's app for daily news and videos

Install App

ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ : ಅಶೋಕ್

Webdunia
ಭಾನುವಾರ, 24 ಏಪ್ರಿಲ್ 2022 (07:49 IST)
ಬೆಂಗಳೂರು : ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು.

ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು.

ಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ಹಿಂದೆ ಅವರದೇ ಪಕ್ಷದ ಸಿಎಂ ಬದಲಾಯಿಸಲು ರಾಮನಗರ, ಕನಕಪುರದಲ್ಲಿ ಗಲಾಟೆ ಮಾಡಿಸುತ್ತಿದ್ದರು.

ಡಿಜೆಹಳ್ಳಿ-ಕೆಜಿಹಳ್ಳಿಯಲ್ಲೂ ಅವರದೇ ಪಕ್ಷದ ಶಾಸಕನ ಮನೆಯನ್ನು, ಅವರದೇ ಪಕ್ಷದ ಮಾಜಿ ಮೇಯರ್ಗೆ ಬೆಂಕಿ ಹಾಕಿಸಿ, ಜೈಲಿಗೆ ಹೋಗಿದ್ದ ಎಂದು ಕಿಡಿಕಾರಿದರು.

ಹುಬ್ಬಳ್ಳಿ ಗಲಾಟೆಯಲ್ಲೂ ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷನೇ ಭಾಗಿಯಾಗಿದ್ದಾನೆ. ಪಿಎಸ್ಐ ನೇಮಕಾತಿ ಹಗರಣದಲ್ಲೂ ಕಾಂಗ್ರೆಸ್ ಮುಖಂಡನೇ ಇದ್ದಾನೆ. ಹೀಗೆ ಅವರೇ ಎಲ್ಲ ಹಗರಣದಲ್ಲೂ ಭಾಗಿಯಾಗಿ ಉಳಿದವರ ಬಗ್ಗೆ ಮಾತನಾಡುತ್ತಾರೆ.

ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಸರ್ವಪ್ರಯತ್ನ ಮಾಡುತ್ತಿದೆ. ವಿದೇಶಿ ಶಕ್ತಿಗಳು ಈ ಎಲ್ಲ ಘಟನೆಯಲ್ಲಿ ಭಾಗಿಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಬೇಕು ಎಂದರು.

ಗಲಭೆಕೋರರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ, ನಮ್ಮಲ್ಲೂ ಯುಪಿ, ಮಧ್ಯಪ್ರದೇಶ ಮಾದರಿ ರೂಲ್ಸ್ ಬರಬೇಕಾದ ಸ್ಥಿತಿ ಬರುತ್ತಿದೆ. ಬುಲ್ಡೋಜರ್ ರೂಲ್ಸ್ ತಂದರೆ ಮಾತ್ರ ಕೃತ್ಯಗಳನ್ನು ಮಟ್ಟ ಹಾಕಲು ಸಾಧ್ಯ.

ಗಲಭೆ ಸೃಷ್ಟಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಬುಲ್ಡೋಜರ್ ಬಳಸಿ ಆರೋಪಿಗಳ ಅಕ್ರಮ ಮನೆಗಳನ್ನು ತೆರವು ಮಾಡಬೇಕು ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments